ರಾಜ್ಯದಲ್ಲಿ 1977 ಕೊರೊನಾ ಸೋಂಕು ದೃಢ; 3188 ಸೋಂಕಿತರು ಡಿಸ್ಚಾರ್ಜ್

bengaluru| Geethanjali| Last Modified ಗುರುವಾರ, 15 ಜುಲೈ 2021 (18:37 IST)

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹೊರಡಿಸಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 462 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 10 ಮಂದಿ ಅಸುನೀಗಿದ್ದಾರೆ.

ರಾಜ್ಯದಲ್ಲಿ ಒಂದೇ ದಿನ 3188 ಮಂದಿ ಡಿಸ್ಚಾರ್ಜ್ ಆಗಿದರೆ, ಬೆಂಗಳೂರಿನಲ್ಲಿ 501 ಮಂದಿ ಗುಣಮುಖಿತರಾಗಿದ್ದಾರೆ. ಇದರಿಂದ ಒಟ್ಟಾರೆ ಗುಣಮುಖಿತರ ಸಂಖ್ಯೆ 28,10,121ಕ್ಕೆ ಏರಿಕೆಯಾಗಿದೆ.

ಒಟ್ಟಾರೆ ಸೋಂಕಿತರ ಸಂಖ್ಯೆ 28,78,564ಕ್ಕೆ ಏರಿಕೆಯಾದರೆ, ಒಟ್ಟಾರೆ ಸಾವಿನ ಸಂಖ್ಯೆ 36,037ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 32,383ಕ್ಕೆ ಇಳಿಕೆಯಾಗಿದೆ.ಇದರಲ್ಲಿ ಇನ್ನಷ್ಟು ಓದಿ :