ಬೆಳಗಾವಿ : ರಾಜ್ಯದಲ್ಲಿ 2.53 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಈ ವರ್ಷದಲ್ಲಿ ಒಂದು ಲಕ್ಷ ಹುದ್ದೆ ಭರ್ತಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಮಂಜೇಗೌಡ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಸಿಎಂ, ರಾಜ್ಯದಲ್ಲಿ ಒಟ್ಟು 7.60 ಲಕ್ಷ ಹುದ್ದೆ ಮಂಜೂರಾಗಿದೆ. ಈ ಪೈಕಿ 5.11 ಲಕ್ಷ ಹುದ್ದೆ ಭರ್ತಿಯಾಗಿವೆ. ಇದರಲ್ಲಿ 2.53 ಲಕ್ಷ ಹುದ್ದೆ ಖಾಲಿ ಇವೆ