ಬೆಂಗಳೂರು : ಕರ್ನಾಟಕದಲ್ಲಿ ಎರಡೂವರೆ ಸಿಎಂಗಳು ಅಧಿಕಾರದಲ್ಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಲೇವಡಿ ಮಾಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಶಕ್ತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಇಲ್ಲಿ ಸಿಎಂ ಕುಮಾರಸ್ವಾಮಿ ಅವರು ಗುಮಾಸ್ತ ಅಂತಾರೆ, ಸಿದ್ದರಾಮಯ್ಯ ಸೂಪರ್ ಸಿಎಂ, ಪರಮೇಶ್ವರ್ ಅರ್ಧ ಸಿಎಂ ಅಂತಾರೆ. ಒಟ್ಟಾರೆ ಕರ್ನಾಟಕದಲ್ಲಿ ಎರಡೂವರೆ ಸಿಎಂಗಳು ಅಧಿಕಾರದಲ್ಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಸರ್ಕಾರದ ರಚಿಸಿದ ವೇಳೆ ಸಂಪೂರ್ಣ ಸಾಲಮನ್ನಾ