ಹಾವೇರಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದಿನಿಂದ ಎರಡು ದಿನ ಹಾವೇರಿ, ಹುಬ್ಬಳ್ಳಿ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಇಂದು ಸಿಎಂ ಬೊಮ್ಮಾಯಿ ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸುತ್ತಾರೆ. ಬೆಳಗ್ಗೆ 10 ಗಂಟೆಗೆ ತಡಸ ಗ್ರಾಮಕ್ಕೆ ಭೇಟಿ ನೀಡಿ ರಸ್ತೆ ಕಾಮಗಾರಿ, ನೂತನ ಪ್ರವಾಸಿ ಮಂದಿರಕ್ಕೆ ಶಂಕುಸ್ಥಾಪನೆ ನೆರವೇರಿಸುತ್ತಾರೆ. ಶಿಗ್ಗಾಂವಿ ತಾಲೂಕಿನ ತಡಸದಲ್ಲಿ 39