ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್`ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಹಲವು ತಂಡಗಳಲ್ಲಿ ತನಿಖೆ ನಡೆಯುತ್ತಿದ್ದು, ಇಬ್ಬರು ಶಂಕಿತರನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಹೌದು, ಸಿಸಿಟಿವಿ ದೃಶ್ಯ ಆಧರಿಸಿ ಗೌರಿ ಲಂಕೇಶ್ ಹತ್ಯೆಯಾದ ಆಸುಪಾಸಿನಲ್ಲಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡಿದ್ದ ವ್ಯಕ್ತಿಗಳಿವರು ಎನ್ನಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ರಾಜರಾಜೇಶ್ವರಿ ನಗರದಲ್ಲಿ ತೀವ್ರ ಶೋಧ ಕೈಗೊಂಡಿದ್ದ ಎಸ್`ಐಟಿ ಅಧಿಕಾರಿಗಳು ಶಂಕಿತರು, ಅನುಮಾನಾಸ್ಪದ ವ್ಯಕ್ತಿಗಳ