ಡೆಡ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಬಳ್ಳಾರಿ ಜಿಲ್ಲೆಯಲ್ಲಿ ಎರಡು ವಾರ ಲಾಕ್ ಡೌನ್ ಮಾಡಬೇಕು ಎಂದು ಶಾಸಕರೊಬ್ಬರು ಆಗ್ರಹ ಮಾಡಿದ್ದಾರೆ.ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ದಿನೇದಿನೇ ಅತ್ಯಂತ ವೇಗದಲ್ಲಿ ಹಬ್ಬುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಜಿಲ್ಲಾಡಳಿತ ಸಂಪೂರ್ಣವಾಗಿ ಎರಡು ವಾರಗಳ ಕಾಲ ಲಾಕ್ಡೌನ್ ಮಾಡುವುದಕ್ಕೆ ಮುಂದಾಗಬೇಕು. ಲಾಕ್ಡೌನ್ ಮಾಡುವುದಕ್ಕಿಂತ ಮುಂಚೆಯೇ ಜನರು ಪಡಿತರ ಮತ್ತು ತರಕಾರಿಗಳ ಖರೀದಿಸುವುದಕ್ಕೆ ವ್ಯವಸ್ಥೆ ಮಾಡಬೇಕು. ಒಟ್ಟಿನಲ್ಲಿ ಸಂಪೂರ್ಣ ಲಾಕ್ಡೌನ್ ಆದಾಗ ಈ ವೇಗಕ್ಕೆ ಕಡಿವಾಣ ಬಿಳಬಹುದು