ಅನ್ನ ಭಾಗ್ಯಕ್ಕೆ ಸೇರಿದ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.ಅಕ್ರಮವಾಗಿ ಅನ್ನಭಾಗ್ಯಕ್ಕೆ ಸೇರಿದ್ದ ಅಕ್ಕಿಯನ್ನು ಬೂಲೆರೋ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ವಾಹನ ಸಮೇತ 20 ಕ್ವಿಂಟಲ್ ಅಕ್ಕಿ ವಶಪಡಿಸಿಕೊಂಡಿರುವ ಘಟನೆ ಮಾನ್ವಿ ತಾಲೂಕಿನ ಕುರ್ಡಿ ಕ್ರಾಸ್ ಬಳಿ ಜರುಗಿದೆ.ಅನ್ನಭಾಗ್ಯಕ್ಕೆ ಸೇರಿದ್ದ ಅಕ್ಕಿಯನ್ನು ರಾಯಚೂರಿಗೆ ಸಾಗಿಸಲಾಗುತ್ತಿತ್ತು ಎನ್ನುವ ಖಚಿತ