ಬೆಳಗಾವಿ : ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನಕ್ಕೆ ಸೋಮವಾರ (ಇಂದು) ಚುನಾವಣೆ ಹಿನ್ನೆಲೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪಾಲಿಕೆ ಕಚೇರಿ ಮುಂಭಾಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.