ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಮಾಜಿ ಸಿಎಂ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಕೊರೊನಾ ತಡೆಗೆ ಅಂತ ಖರೀದಿಸಲಾಗಿರುವ ಉಪಕರಣಗಳ ಖರೀದಿಯಲ್ಲಿ 2000 ಕೋಟಿ ರೂಪಾಯಿಗಳ ಹಗರಣ ನಡೆಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸಿಎಂ ಈವರೆಗೆ 324 ಕೋಟಿ ಖರ್ಚಾಗಿದೆ ಅಂತಾರೆ. ಆದರೆ ನನಗೆ ಬಂದಿರುವ ಮಾಹಿತಿ ಪ್ರಕಾರ ಕಾರ್ಮಿಕ ಇಲಾಖೆ 1 ಸಾವಿರ ಕೋಟಿ ರೂ., ಆರೋಗ್ಯ ಇಲಾಖೆ 700 ಕೋಟಿ