2022 ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲಿ ಪದವಿ ಕಾಲೇಜುಗಳಲ್ಲಿ ನೆನ್ನೆ ಯಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಆದರೆ, ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂಬ ನಿಯಮದಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ.ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲೇ ಪ್ರವೇಶ ಪಡೆಯಬೇಕೆಂದು ಉನ್ನತ ಶಿಕ್ಷಣ ಇಲಾಖೆ ನಿಯಮ ಮಾಡಿದೆ. ಪ್ರವೇಶ ಪಡೆಯುವದಕ್ಕಾಗಿ ವಿದ್ಯಾರ್ಥಿಗಳು ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವುದಕ್ಕೆ ಹರಸಾಹಸ ಪಡುತ್ತಿದ್ದಾರೆ.