ರಾಜ್ಯ ಸರಕಾರ ಪೊಲೀಸ್ ಇಲಾಖೆಗೆ ಭರ್ಜರಿ ಸರ್ಜರಿ ಮಾಡಿದ್ದು 213 ಪೊಲೀಸ್ ಸಬ್ಇನ್ಸೆಪೆಕ್ಟರ್ಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶ ಕಮಲ್ ಪಂಥ್, 213 ಪೊಲೀಸ್ ಸಬ್ಇನ್ಸೆಪೆಕ್ಟರ್ಗಳು ಮತ್ತು 58 ಡಿವೈಎಸ್ಪಿಗಳನ್ನು ವರ್ಗ ಮಾಡಿ ಆದೇಶಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇಲಾಖೆಗೆ ಮತ್ತಷ್ಟು ಚುರುಕು ಮುಟ್ಟಿಸುವ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡಲಾಗಿದೆ ಎನ್ನಲಾಗುತ್ತಿದೆ. ನಿನ್ನೆಯಷ್ಟೆ ಐವರು ಐಎಎಸ್