ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ ಮೂರು-ನಾಲ್ಕು ತಿಂಗಳಿನಿಂದ ಕೊರೊನಾ ಸೋಂಕು ಮಂದಗತಿಯಲ್ಲಿತ್ತು. ಆದರೆ ಇದೀಗ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸ್ಫೋಟ ಉಂಟಾಗಿದೆ. ಕೇರಳದಿಂದ ಶಿವಮೊಗ್ಗಕ್ಕೆ ಬಂದವರಿಂದಾಗಿ ಮಲೆನಾಡಿನ ಜನರಿಗೆ ಇದೀಗ ಮತ್ತೆ ಆತಂಕ ಎದುರಾಗಿದೆ. ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಾಲೇಜ್ ಹಾಗೂ ಆಸ್ಪತ್ರೆಯನ್ನು ಸೀಲ್ಡೌನ್ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿರುವ ನರ್ಸಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ