ಕಲಬುರ್ಗಿ: ಮುಂದಿನ ನಾಲ್ಕೈದು ದಿನಗಳಲ್ಲಿ ಕಾಂಗ್ರೆಸ್ ಸಚಿವರು, ಶಾಸಕರು ಮಾಡಿರುವ ಭ್ರಷ್ಟಾಚಾರ ದಾಖಲೆ ಬಿಡುಗಡೆ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ಸೆಪ್ಟೆಂಬರ್ 23ರಂದು ಸಿಎಂ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗುವುದು. ಚುನಾವಣೆ ದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ಹಲವು ಯೋಜನೆ ಘೋಷಣೆ ಮಾಡುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಜನವರಿ ನಂತರ ಘೋಷಿಸಿದ ಯಾವುದೇ ಯೋಜನೆ ಕಾರ್ಯರೂಪಕ್ಕೆ ಬರುವುದಿಲ್ಲ.