ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ ಬಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಬಿಜೆಪಿ ಹೈಕಮಾಂಡ್ ವಿರುದ್ಧವೇ ದೊಡ್ಡ ಬಾಂಬ್ ಹಾಕಿದ್ದಾರೆ. ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ನನ್ನ ಬಳಿ ಬಂದು 2500 ಕೋಟಿ ರೂ. ಕೊಟ್ಟರೆ ಸಿಎಂ ಮಾಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಅದಕ್ಕೆ ನಾನು ಒಪ್ಪಲಿಲ್ಲ ಎಂದು ಹೇಳಿದ್ದಾರೆ. ೨೫೦೦ ಕೋಟಿ ಕೊಡಬೇಕಂತೆ? ಹೇಗೆ ಕೊಡಲಿ ನಾನು ಅಷ್ಟೊಂದು ದುಡ್ಡು? ಗೋದಾಮಿನಲ್ಲಿ ಇಡಬೇಕಾ