ಬೆಂಗಳೂರು ನಗರದಲ್ಲಿ ಭಾರಿ ಮಳೆ ಸುರಿದ ಪರಿಣಾಮ ನೀರು ನುಗ್ಗಿರುವ ಮನೆಗಳಿಗೆ 25,000 ರೂ. ಹಾಗೂ ಮೃತ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನ ಮಳೆಯಿಂದ ಹಾನಿಗೊಳಗಾದ ಹೊಸಕೆರೆಹಳ್ಳಿ ಹಾಗೂ ರಾಜರಾಜೇಶ್ವರಿನಗರದ ಬಡಾವಣೆಗಳಿಗೆ ಬುಧವಾರ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀರು ನುಗ್ಗಿರುವ ತಗ್ಗು ಪ್ರದೇಶದ ಜನರಿಗೆ ಊಟದ ವ್ಯವಸ್ಥೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದರು. ಬೆಂಗಳೂರಿನಲ್ಲಿ