ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಯಾವುದೇ ಅಧಿಕಾರ ನೀಡಿಲ್ಲ. ಆದರೆ ನನ್ನ ಸಾಧನೆಯನ್ನು ಪರಿಗಣಿಸಿ 79 ವರ್ಷ ಆಗಿದ್ದರೂ 2 ವರ್ಷ ಮುಖ್ಯಮಂತ್ರಿಯನ್ನಾಗಿ ಮಾಡಿದ್ದಾರೆ ಎಂದರು. ಜುಲೈ 25ರಂದು ಹೈಕಮಾಂಡ್ ನಿಂದ ಸೂಚನೆ ಬರಲಿದ್ದು, ಅದರಂತೆ ಪಕ್ಷವನ್ನು ಕಟ್ಟಿ ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರುವ ಪ್ರಯತ್ನ ಮಾಡುತ್ತೇನೆ. ಇದಕ್ಕೆ ಎಲ್ಲರೂ ಸಹಕರಿಸಬೇಕು. ಕೆಲವೇ ದಿನಗಳಲ್ಲಿ ನಾನು ಸಿಎಂ ಆಗಿ 2 ವರ್ಷ