ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ವಿವಿಧ ಕಾರ್ಯಕ್ರಮಗಳ ಸಾಲಿನಲ್ಲಿ 28000 ಕೋಟಿ ರೂ. ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್ತಿನ ಸಭೆಯ ನಂತರ ಅವರು ಮಾಧ್ಯಮದ ಜೊತೆ ಕಾರ್ಯಕ್ರಮ ನಡೆಸಿದರು. ಸಭೆಯಲ್ಲಿ ಕಳೆದ ವರ್ಷದ ಅನುದಾನದಲ್ಲಿ ಎಷ್ಟು ಬಳಕೆಯಾಗಿದೆ ಮತ್ತು ಎಷ್ಟು ಬಾಕಿ ಇದೆ ಎನ್ನುವುದನ್ನು ಪರಿಶೀಲಿಸಲಾಗಿದೆ.