ಲೋಕಾಯುಕ್ತ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಇಂದು ನಗರದ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಎರಡನೇ ಆರೋಪ ಪಟ್ಟಿಯನ್ನು ಸಲ್ಲಿಸಿದ್ದು, ಇದರಲ್ಲಿ ಅಶ್ವಿನ್ ರಾವ್ ಮೊದಲ ಆರೋಪಿಯಾಗಿದ್ದಾನೆ. ಹೌದು, ತನಿಖಾಧಿಕಾರಿ ಲಾಬೂರಾಮ್ ನೇತೃತ್ವದ ವಿಶೇಷ ತನಿಖಾ ತಂಡ ಈ ಎರಡನೇ ಆರೋಪ ಪಟ್ಟಿಯನ್ನು ಸಲ್ಲಿಸಿದ್ದು, ಚನ್ನಬಸಪ್ಪ ಅವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. 1610 ಪುಟಗಳ ಈ ತನಿಖಾ ವರದಿಯನ್ವಯ