ಮುಂಬರುವ ಮೂರು-ನಾಲ್ಕು ದಿನಗಳ ಕಾಲ ಕರ್ನಾಟಕದ ಹಲವೆಡೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಈಗಾಗಲೇ ಸಾಕಷ್ಟ ಸದ್ದು ಮಾಡಿ ತಣ್ಣಗಾಗಿದ್ದ ಮಳೆ ಮುಂಬರುವ ನಾಲ್ಕು ದಿನಗಳ ಕಾಲ ಮತ್ತೆ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ.