ಪಶ್ಚಿಮ ಬಂಗಾಳ ಮತ್ತು ದಕ್ಷಿಣ ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯಿಂದಾಗಿ, ರಾಜ್ಯಾದ್ಯಂತ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಇಲಾಖೆಯು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಇತರೆ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಹೀಗಾಗಿ ಆರೇಂಜ್ ಅಲರ್ಟ್ ಘೋಷಿಸಿದೆ. ಇನ್ನು ಶಿವಮೊಗ್ಗ, ಮೈಸೂರು, ಕೋಲಾರ, ಕೊಡಗು, ಹಾಸನ,