ಚಲಿಸುತ್ತಿರುವ ರೈಲಿನ ಮುಂದೆ ಸೆಲ್ಫಿ ಕ್ಲಿಕ್ಕಿಸಲು ಹೋದ ಮೂವರು ಯುವಕರು ರೈಲಿಗೆ ಸಿಲುಕಿ ಭೀಕರವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ರಾಮನಗರದ ಬಿಡದಿ ಬಳಿಯ ವಂಡರ್ ಲಾ ಬಳಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರು ಯುವಕರು ರೈಲು ಬರುತ್ತಿದ್ದದ್ದನ್ನ ನೋಡಿ ಅದರ ಮುಂದೆ ಹೋಗಿ ಸೆಲ್ಫಿ ಕ್ಲಿಕ್ಕಿಸಲು ಯತ್ನಿಸಿದ್ದಾರೆ. ಈ ಸಂದರ್ಭ ವೇಗವಾಗಿ ಬರುತ್ತಿದ್ದ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಬೆಂಗಳೂರಿನ ನ್ಯಾಶನಲ್ ಕಾಲೇಜು ವಿದ್ಯಾರ್ಥಿಗಳು ಎಂದು