ಸಿಎಂ ಸಿದ್ದರಾಮಯ್ಯ ಭೂಸ್ವಾಧೀನದಿಂದ 300 ಕೋಟಿ ಮೌಲ್ಯದ ಭೂಮಿಯನ್ನು ಕೈಬಿಟ್ಟಿದ್ದಾರೆ ಎಂದು ಬಿಜೆಪಿ ಮುಖಂಡ ಬಿ.ಜಿ.ಪುಟ್ಟಸ್ವಾಮಿ ಆರೋಪಿಸಿದ್ದಾರೆ. ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕಾನೂನುಬಾಹಿರವಾಗಿ ಡಿನೋಟಿಫಿಕೇಶನ್ ಮಾಡಿರುವುದಕ್ಕೆ ನನ್ನ ಬಳಿ ದಾಖಲೆಗಳಿವೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಉತ್ತರ ಭಾಗದಲ್ಲಿರುವ ಭೂಪಸಂದ್ರದ ಸರ್ವೆ ನಂಬರ್ 20 ಮತ್ತು ಸರ್ವೆ ನಂಬರ್ 21 ರಲ್ಲಿ 6.26 ಎಕರೆ ಭೂಮಿಯ ಮೌಲ್ಯ 300 ಕೋಟಿ ರೂಪಾಯಿಗಳಾಗಿದ್ದು