ಕೋವಿಡ್-19 ದಿಂದ ಗುಣಮುಖರಾದ ಒಟ್ಟು 34 ರೋಗಿಗಳು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಕೋವಿಡ್-19 ದಿಂದ ಗುಣಮುಖರಾದ ಒಟ್ಟು 34 ರೋಗಿಗಳು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದು, ಸಧ್ಯಕ್ಕೆ 13 ರೋಗಿಗಳು ಮಾತ್ರ ಕೋವಿಡ್-19 ಪಾಸಿಟಿವ್ ಸಕ್ರಿಯ ರೋಗಿಗಳಾಗಿದ್ದಾರೆ. ಪರಿಣಾಮಕಾರಿಯಾದ ಚಿಕಿತ್ಸೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.ಈವರೆಗೆ 50 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 2,175 ಜನರು ಬಂದ