ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 348 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39, 53,937ಕ್ಕೆ ಏರಿಕೆಯಾಗಿದೆ. ಇಂದು 311 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 2,478 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ 339 ಹೊಸ ಪ್ರಕರಣ ಪತ್ತೆಯಾಗಿದ್ದು, 277 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.