ಕರ್ನಾಟಕದ ಬೆಂಗಳೂರು, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.