ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು 4 ಕಾಡಾನೆಗಳು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕಣ್ಣಂಗಾಲ ನಡೆದಿದೆ. ಜೂನ್ 14ರಂದೂ ಸಹ 2 ಕಾಡಾನೆಗಳು ವಿದ್ಯುತ್ ತಂತಿ ತುಳಿದು ಮೃತಪಟ್ಟಿದ್ದವು. ಇದಾದ ಬಳಿಕವೂ ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೇವಲ 15 ದಿನಗಳ ಅಂತರದಲ್ಲಿ 6 ಕಾಡಾನೆಗಳು ವಿದ್ಯುತ್ ತಂತಿ ತಾಗಿ ಮೃತಪಟ್ಟಿವೆ.ಕಳೆದ ಕೆಲ ದಿನಗಳಿಂದ ವಿರಾಜಪೇಟೆಯಲ್ಲಿ ಮಳೆ ಸುರಿಯುತ್ತಿದ್ದು, ಬಿರುಗಾಳಿ ಅಬ್ಬರಕ್ಕೆ ವಿದ್ಯುತ್