ಇಂದು ರಾಜ್ಯ ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆಯನ್ನ ನಡೆಸಲಾಗಿದೆ.ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಗುತ್ತಿಗೆದಾರರಿಂದ ಪ್ರತಿಭಟನೆ ನಡೆಯುತ್ತಿದೆ.ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಗುತ್ತಿಗೆದಾರರು ಭಾಗಿಯಾಗಿದ್ದು, ರಾಜ್ಯ ಗುತ್ತಿಗೆದಾರರ ಸಂಘದ ಕೆಂಪಣ್ಣ ನೇತೃತ್ವದಲ್ಲಿ ಸಾಂಕೇತಿಕವಾಗಿ ಒಂದು ದಿನ ಕಾಮಗಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಾಗಿದ್ದು,ಸರ್ಕಾರದಿಂದ ಸುಮಾರು 20 ಸಾವಿರ ಕೋಟಿ ಬಿಲ್ ಬಾಕಿ ಹಿನ್ನೆಲೆ ಕಳೆದ ಬಾರಿ ಸರ್ಕಾರ ನೀಡಿದ್ದ ಭರವಸೆ ಇನ್ನೂ ಭರವಸೆಯಾಗಿ ಉಳಿದಿದೆ.ಬಿಲ್ ವಿಚಾರದಲ್ಲಿ ಕೊಟ್ಟ