ತೆಲಂಗಾಣ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದೇ ತಡ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಕಸರತ್ತಿಗೆ ಇಳಿದಿವೆ. ಮತದಾರರ ಮನ ಗೆಲ್ಲಲ್ಲು ಹಣ, ಸೀರೆ, ಮದ್ಯ ಹಂಚಿಕೆ ಮಾಡಲಾಗುತ್ತಿದೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಇದರ ನಡುವೆ ಬೆಳಗಾವಿಯಲ್ಲಿ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮತದಾರರಿಗೆ ಹಂಚಲು ತರಲಾಗಿದ್ದ ಬ್ರ್ಯಾಂಡೆಡ್ ಮದ್ಯವನ್ನು ಜಪ್ತಿ ಮಾಡಿದ್ದಾರೆ.ಬೆಳಗಾವಿಯಲ್ಲಿ ತೆಲಂಗಾಣ ಚುನಾವಣೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋವಾ ಮದ್ಯ ಜಪ್ತಿ ಮಾಡಲಾಗಿದೆ. ಲಾರಿ ಸಮೇತ