ಶಿಕ್ಷಣಕಾಶಿ ಖ್ಯಾತಿಯ ಧಾರವಾಡದಲ್ಲಿ ಜ. 4 ರಂದು ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚುವರಿಯಾಗಿ 5 ಕೋಟಿ ರೂ. ಅನುದಾನವನ್ನು ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಜಿಲ್ಲಾ ಅಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.ಧಾರವಾಡ ನಗರದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರದ ಸೌಂದರ್ಯಕ್ಕೆ ಆದ್ಯತೆ ನೀಡಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.