ರಾಜಧಾನಿ ಬೆಂಗಳೂರು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ 5 ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ನೈರುತ್ಯ ಭಾಗದಿಂದ ಪ್ರವೇಶ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದಾಗಿ ರಾಜಧಾನಿಯಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು ಮಿಂಚು, ಗಾಳಿ ಸಹಿತ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ಇಂದು ಮತ್ತೆ ನಾಳೆ ಸಾಧಾರಣ ಮಳೆ ಇದ್ದು, ಕೊನೆಯ ಮೂರು ದಿನಗಳ ಭಾರೀ ಮಳೆ ಸಂಭವ