ಬೆಳಗಾವಿಯ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ತಲಾ 5 ಲಕ್ಷಗಳ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗವಾವಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಬೆಳಗಾವಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತ ಸಂಭವಿಸಿರುವುದುಅತ್ಯಂತ ದು:ಖಕರ ಸಂಗತಿ. ಅಪಘಾತದಲ್ಲಿ 7 ಜನ ಮೃತಪಟ್ಟಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆಯ ವ್ಯವಸ್ಥೆ ಪೂರೈಸಲು ಈಗಾಗಲೇ ಸೂಚನೆ ನೀಡಲಾಗಿದೆ. ಅಪಘಾತದಲ್ಲಿ