ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡ ಪಾವತಿಗೆ ಶೇಕಡ 50ರಷ್ಟು ರಿಯಾಯಿತಿ ಅವಧಿ ಮುಕ್ತಾಯಕ್ಕೆ ಮೂರು ದಿನಗಳು ಮಾತ್ರ ಬಾಕಿ ಇದ್ದು, ಬುಧವಾರ .9.06 ಕೋಟಿ ದಂಡ ಸಂಗ್ರಹವಾಗಿದೆ. ಇದರೊಂದಿಗೆ ಆರು ದಿನಗಳಲ್ಲಿ 18 ಲಕ್ಷ ಪ್ರಕರಣಗಳು ಇತ್ಯರ್ಥವಾಗಿ 51 ಕೋಟಿ ದಂಡ ಸಂಗ್ರಹವಾಗಿದೆ. ಸಂಚಾರ ಉಲ್ಲಂಘನೆ ಸಂಬಂಧ ಹಳೇ ಪ್ರಕರಣಗಳಲ್ಲಿ ದಂಡ ಪಾವತಿಗೆ ಶೇ.50 ರಿಯಾಯಿತಿ ನೀಡಿ ಸಾರಿಗೆ ಇಲಾಖೆಗೆ ಆದೇಶಿಸಿತ್ತು. ಇದಕ್ಕೆ ಜನರಿಂದ ಭರ್ಜರಿ ಪ್ರತಿಕ್ರಿಯೆ