75ನೇ ಸ್ವಾತಂತ್ರ್ಯ ದಿನಾಚರಣೆಗೆ ಇನ್ನೇನು 2 ದಿನ ಬಾಕಿ ಇದ್ದು, ಈ ಅಮೃತ ಘಳಿಗೆಯ ಆಚರಣೆಗೆ ಇಡೀ ದೇಶವೇ ಕಾತರದಿಂದ ಕಾಯುತ್ತಿದೆ. ದೇಶದೆಲ್ಲೆಡೆ ಅಮೃತ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಚರಿಸುತ್ತಿದ್ದು, ಬಾಗಲಕೋಟೆಯಲ್ಲಿ 500 ಮೀಟರ್ ಉದ್ದದ ತಿರಂಗಾ ಯಾತ್ರೆ ಮಾಡುವುದರ ಮೂಲಕ ವಿಶೇಷವಾಗಿ ಆಚರಣೆ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರಿಂದ ಈ ಕಾರ್ಯಕ್ರಮ ಆಯೋಜನೆ ಆಗಿದ್ದು, ಶಾಸಕ ವೀರಣ್ಣ ಚರಂತಿಮಠ ಯಾತ್ರೆಗೆ ಚಾಲನೆ ನೀಡಿದರು. ನಗರದ ವಿದ್ಯಾಗಿರಿಯ ಪ್ರಮುಖ