ಬೆಂಗಳೂರು-ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬುಧವಾರ 201 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 974ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 201 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ರಾಜ್ಯದಲ್ಲಿ ಒಬ್ಬರು ಮೃತಪಟ್ಟಿದ್ದಾನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.