ಬೆಂಗಳೂರು-ಏಕಗವಾಕ್ಷಿ ಅನುಮೋದನಾ ಸಮಿತಿಯು ಹಸಿರು ನಿಶಾನೆ ನೀಡಿರುವ ಈ ಯೋಜನೆಗಳ ಪೈಕಿ 24 ಯೋಜನೆಗಳು ಮಾತ್ರ ಬೆಂಗಳೂರು ಜಿಲ್ಲೆಯಲ್ಲಿದ್ದು, ಉಳಿದ 217 ಯೋಜನೆಗಳು ಹೊರಗಿನ ಜಿಲ್ಲೆಗಳಲ್ಲಿವೆ. ಬೆಂಗಳೂರು ಜಿಲ್ಲೆಯಲ್ಲಿ 21,537 ಕೋಟಿ ರೂ. ಹೂಡಿಕೆ ಆಗುತ್ತಿದ್ದು, 19,243 ಉದ್ಯೋಗ ಸೃಷ್ಟಿ ಆಗಲಿವೆ. ಉಳಿದ ಜಿಲ್ಲೆಗಳಲ್ಲಿ 28,488 ಕೋಟಿ ರೂ. ಬಂಡವಾಳ ಹೂಡಿಕೆ ಆಗುತ್ತಿದ್ದು, 38,808 ಮಂದಿಗೆ ಉದ್ಯೋಗ ಸಿಗಲಿವೆ ಎಂದು ಅವರು ಅಂಕಿಅಂಶಗಳ ಸಮೇತ ವಿವರಿಸಿದರು. ಬೆಂಗಳೂರನ್ನು ಹೊರತುಪಡಿಸಿ