ವಿವಿಧ ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು ಮತ್ತು ವಿಶ್ವ ವಿದ್ಯಾಲಯಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಿದ್ದು, ಖಾಲಿ ಇರುವ ಬ್ಯಾಕ್ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿಯವರು, ಖಾಲಿ ಇರುವ ಬ್ಯಾಕ್ಲಾಗ್ ಹುದ್ದೆಗಳನ್ನು ಶೀಘ್ರ ಗುರುತಿಸಿ ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಅಧಿಕಾರಿಗಳಿಗೆ ಆದೇಶ ಕೊಟ್ಟರು. 4ಸಾವಿರ