ರಾಮನಗರ: ಕೆಎಸ್ಆರ್ಟಿಸಿ ಬಸ್ ಮತ್ತು ಕ್ವಾಲಿಸ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕನಕಪುರ ತಾಲೂಕಿನ ಕಮ್ಮಾಳೆ ಗೇಟ್ ಬಳಿ ನಡೆದಿದೆ. ಬೆಂಗಳೂರಿನಲ್ಲಿ ಹೋಟೆಲ್ ನಡೆಸುತ್ತಿದ್ದ ಸ್ನೇಹಿತರು ವೀಕೆಂಡ್ ರಜೆ ಹಿನ್ನೆಲೆಯಲ್ಲಿ ಮಹದೇಶ್ವರನ ಬೆಟ್ಟಕ್ಕೆ ಬಂದಿದ್ದಾರೆ. ಮಾದಪ್ಪನ ದರ್ಶನ ಮುಗಿಸಿ ವಾಪಸ್ ಬರುವಾಗ ಕನಕಪುರ-ಮಳವಳ್ಳಿ ಮುಖ್ಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಬಸ್ಗೆ ಡಿಕ್ಕಿಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ