ಯಾವುದೇ ಕಾರಣಕ್ಕೂ 6ನೇ ವೇತನ ಜಾರಿ ಸಾಧ್ಯವಿಲ್ಲ- ಸಿಎಸ್ ರವಿಕುಮಾರ್ ಸ್ಪಷ್ಟನೆ

ಬೆಂಗಳೂರು| pavithra| Last Modified ಮಂಗಳವಾರ, 6 ಏಪ್ರಿಲ್ 2021 (12:29 IST)
ಬೆಂಗಳೂರು : ನಾಳೆ ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ ಸಿಎಂ ಬಿಎಸ್ ವೈ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ.

ಸಿಎಂ ಸಭೆ ಬಳಿಕ ಸುದ್ದಿಗೋಷ್ಠಿ ಕರೆದ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು, 6ನೇ ಆಯೋಗ ಜಾರಿ ಮಾಡಲು ಆಗಲ್ಲ. ಯಾವುದೇ ಕಾರಣಕ್ಕೂ 6ನೇ ವೇತನ ಜಾರಿ ಸಾಧ್ಯವಿಲ್ಲ. ಸಾರಿಗೆ ಸಿಬ್ಬಂದಿಗೆ ಶೇ.8ರಷ್ಟು ವೇತನ ಹೆಚ್ಚಳ ಮಾಡ್ತೀವಿ. ಯಾರಿಗೂ ವೇತನ ಕಡಿತ ಮಾಡಿಲ್ಲ ಎಂದು ಸಾರಿಗೆ ನೌಕರರಿಗೆ ರವಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ನೀತಿ ಸಂಹಿತೆ ಇರುವುದರಿಂದ ಸದ್ಯ ಆಗಲ್ಲ. ಚುನಾವಣಾ ಆಯೋಗ ಅನುಮತಿ ಕೊಡಬೇಕು. ಅನುಮತಿ ಕೊಟ್ರೆ ಈಗಲೇ ಘೋಷಣೆ ಮಾಡ್ತೇವೆ ಎಂದು ಅವರು ತಿಳಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :