ಬಾಲಕಿಯನ್ನು ಮೇಲೆ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕೊನೆಗೂ ಮಂಗಳೂರಿನ ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕನ್ನಡಿಕಟ್ಟೆ-ಮೇಲಂತಬೆಟ್ಟು ನಿವಾಸಿ ಮನೋಜ್ ಬಿ. ಶೆಟ್ಟಿ ಬಂಧಿತ ಆರೋಪಿ. 2011ರ ಜೂನ್ 24ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚೂರು ನೀರುಡೆಯ 7ನೇ ತರಗತಿಯ ವಿದ್ಯಾರ್ಥಿನಿ ಸಿದ್ಧಾರ್ಥ ನಗರದ ಸರಕಾರಿ ಶಾಲೆಗೆ ತೆರಳುತ್ತಿದ್ದರು. ಈ ವೇಳೆ ಆರೋಪಿ ಮನೋಜ್ ಶೆಟ್ಟಿ ಮತ್ತು ಸ್ನೇಹಿತ ದಿನೇಶ್ ಅಮೀನ್ ಎಂಬವರು ಬಾಲಕಿಯನ್ನು ಪುಸಲಾಯಿಸಿ