73ನೇ ಸ್ವಾತಂತ್ರ್ಯ ದಿನಾಚರಣೆ ಸಂಬಂಧ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಭದ್ರತೆ ಕೈಗೊಳ್ಳಲಾಗಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಸರಕಾರ ತೆಗೆದುಕೊಂಡಿದೆ. ಜಲಪ್ರಳಯದಿಂದ ತತ್ತರಿಸಿಹೊಗಿ ಅನೇಕ ಜೀವಗಳನ್ನು ಬಲಿ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಅದ್ಧೂರಿ ಸ್ವಾತಂತ್ರ್ಯ ದಿನಾಚರಣೆ ಆಚರಿಸದಿರಲು ಸರಕಾರ ನಿರ್ಧರಿಸಿದೆ. ರಾಜ್ಯದ ಬಹುತೇಕ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿಹೋಗಿವೆ. ಇನ್ನು ಸಚಿವ ಸಂಪುಟ ನೆನೆಗುದಿಗೆ ಬಿದ್ದಿರುವುದರಿಂದ ಆಯಾ ಜಿಲ್ಲೆಗಳ ಹೊಣೆಗಾರಿಕೆಯನ್ನು ಡಿಸಿಗಳಿಗೆ ವಹಿಸಲಾಗಿದೆ. ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ಮಾಡಲಿದ್ದಾರೆ