ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು ದೇಶದ 75 ಜಿಲ್ಲೆಗಳಿಗೆ ಸಮರ್ಪಿಸಿದರು. ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ, ಸಾಮಾನ್ಯ ಜನರ ಜೀವನವನ್ನು ಸರಳಗೊಳಿಸಲು ಈಗ ನಡೆಯುತ್ತಿರುವ ಅಭಿಯಾನದಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕಗಳು ಹೆಚ್ಚು ಮಹತ್ವದ್ದಾಗಿದೆ. ಇದೊಂದು ವಿಶೇಷ ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ಸೌಲಭ್ಯವಾಗಿದ್ದು ಕನಿಷ್ಠ ಡಿಜಿಟಲ್ ಮೂಲಭೂತ ಸೌಕರ್ಯಗಳ ಮೂಲಕ ಗರಿಷ್ಠ ಸೇವೆಗಳನ್ನು ಜನರಿಗೆ ಒದಗಿಸಲಿದೆ ಎಂದರು. ಈ ಸೇವೆಗಳು ಕಾಗದದ ಕೆಲಸ