ಬೆಂಗಳೂರು : ಬಿಬಿಎಂಪಿಯ 2018-19ನೇ ಸಾಲಿನ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ ನಡೆದಿದ್ದು, 828.36 ಕೋಟಿ ರೂ. ದುರ್ಬಳಕೆಯಾಗಿರುವುದು ಲೆಕ್ಕ ಪರಿಶೋಧನಾ ವರದಿಯಿಂದ ಬೆಳಕಿಗೆ ಬಂದಿದೆ. ಇದರಲ್ಲಿ 684.11 ಕೋಟಿ ರೂ. ಮೊತ್ತಕ್ಕೆ ಆಕ್ಷೇಪಣೆ ಸಲ್ಲಿಸಿದ್ದು, 144.25 ಕೋಟಿಗಳನ್ನು ಅಧಿಕಾರಿಗಳು, ಗುತ್ತಿಗೆದಾರರಿಂದ ವಸೂಲು ಮಾಡಲು ಶಿಫಾರಸು ಮಾಡಲಾಗಿದೆ. ಪಾಲಿಕೆಯ 2018-19ನೇ ಸಾಲಿನ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ 879 ಪುಟಗಳ ಲೆಕ್ಕ ಪರಿಶೋಧನಾ ವರದಿಯನ್ನು ಸಿದ್ಧಪಡಿಸಿದ್ದು, ಇದರಲ್ಲಿ ಸಾಮಾನ್ಯ ಆಡಳಿತ, ಶಿಕ್ಷಣ,