ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನ.24ರಿಂದ 26ರವರೆಗೆ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಹುತೇಕ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ನವವಧುವಿನಂತೆ ಮೈಸೂರು ನಗರ ಕಂಗೊಳಿಸುತ್ತಿದೆ. ಇಲ್ಲಿನ ಮಹಾರಾಜ ಕಾಲೇಜಿನ ಆವರಣದಲ್ಲಿ ಮೈಸೂರು ಅರಮನೆಯ ದರ್ಬಾರ್ ಹಾಲ್ ನಂತೆ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಪ್ರಮುಖ ರಸ್ತೆಗಳುದ್ದಕ್ಕೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಹಾಗೂ ಸಾಹಿತಿಗಳ ಕಟೌಟ್ ಗಳನ್ನು ಅಳವಡಿಸಲಾಗಿದೆ.ಎಲ್ಇಡಿ ಬಲ್ಬಗಳನ್ನು ಅಳವಡಿಸಲಾಗಿದ್ದರಿಂದ ರಾತ್ರಿಯಲ್ಲೂ ಮೈಸೂರು ಬೆಳಕಿನಿಂದ ಕಂಗೊಳಿಸುತ್ತಿದೆ. ಪ್ರಮುಖ ರಸ್ತೆ