ಬೆಂಗಳೂರು(ಆ.03): ಕೊರೋನಾದಿಂದಾಗಿ ವಾರ್ಷಿಕ ಪರೀಕ್ಷೆ ನಡೆಸದೆ ದ್ವಿತೀಯ ಪಿಯುಸಿಯ ಎಲ್ಲ ವಿದ್ಯಾರ್ಥಿಗಳನ್ನು ಶಿಕ್ಷಣ ಇಲಾಖೆ ಉತ್ತೀರ್ಣಗೊಳಿಸಿದ್ದರೂ ರಾಜ್ಯಾದ್ಯಂತ 878 ವಿದ್ಯಾರ್ಥಿಗಳು ಫಲಿತಾಂಶ ತಿರಸ್ಕರಿಸಿದ್ದಾರೆ. ನಿರೀಕ್ಷೆಯಷ್ಟುಅಂಕ ಬಂದಿಲ್ಲ, ಪರೀಕ್ಷೆ ಬರೆದರೆ ಹೆಚ್ಚು ಅಂಕಗಳನ್ನು ಪಡೆಯಬಹುದು ಎಂದು ವಿದ್ಯಾರ್ಥಿಗಳು ಈ ನಿರ್ಧಾರ ಕೈಗೊಂಡಿದ್ದಾರೆ. ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿಯಲ್ಲಿ ಪಡೆದ ಅಂಕಗಳನ್ನು ಆಧರಿಸಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಇಲಾಖೆ ಪ್ರಕಟಿಸಿತ್ತು. 6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಫಲಿತಾಂಶ ತೃಪ್ತಿಯಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ