ಮಾಜಿ ಸಿಎಂ ಸಿದ್ದರಾಮಯ್ಯಗೆ ಕುಶಾಲನಗರದಲ್ಲಿ ಮೊಟ್ಟೆ ಎಸೆದ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿದೆ. ಪಕ್ಷ ಅಥವಾ ಸಂಘಟನೆಗೆ ಸಂಬಂಧವಿಲ್ಲದ ಮೂರನೇ ವ್ಯಕ್ತಿಯೊಬ್ಬ ಕಾರಿಗೆ ಮೊಟ್ಟೆ ಎಸೆದು ಪ್ರತಿಭಟನೆ ದಿಕ್ಕು ತಪ್ಪಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಿಜೆಪಿಗರ ಪ್ರತಿಭಟನೆ ನ್ಯಾಯಯುತವಾಗಿತ್ತು. ಆದರೆ ಮೊಟ್ಟೆ ಎಸೆದದ್ದು ಬೇರೆಯವರು ಎಂದು ಶಾಸಕ ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ಈ ಸಂಬಂಧ ಸೋಮವಾರಪೇಟೆಯ ವ್ಯಕ್ತಿಯ ಮೇಲೆ ಪೊಲೀಸರು ನಿಗಾವಹಿಸಿದ್ದು ಹೆಚ್ಚಿನ ವಿಚಾರಣೆ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ.