ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 983 ಹೊಸದಾಗಿ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 21 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 289 ಸೋಂಕು ಪ್ರಕರಣಗಳು ಕಂಡು ಬಂದಿದ್ದು, 5 ಮಂದಿ ಅಸುನೀಗಿದ್ದಾರೆ. ಒಂದೇ ದಿನ 1620 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 618 ಮಂದಿ ಡಿಸ್ಚಾರ್ಜ್ ಆಗಿದ್ದು, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 17746ಕ್ಕೆ