ಎಲ್ಲವೂ ಆನ್ಲೈನ್ ಆಗಿರುವ ಇಂದಿನ ಯುಗದಲ್ಲಿ ಪೊಲೀಸರು ಎಷ್ಟೇ ಅರಿವು ಮೂಡಿಸಿದರೂ ಸೈಬರ್ ವಂಚನೆ ಪ್ರಕರಣಗಳು ಮಾತ್ರ ಕಡಿಮೆಯಾಗುತ್ತಿಲ್ಲ. ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್ ಕ್ಲೈಮ್ ಎಂದು ಬ್ಯಾಂಕಿನ ಹೆಸರಿನಲ್ಲಿ ಲಿಂಕ್ ಕಳಿಸಿದ್ದ ಸೈಬರ್ ಖದೀಮರು 70 ವರ್ಷದ ನಿವೃತ್ತ ಇಂಜಿನಿಯರ್ ಒಬ್ಬರ ಖಾತೆಗೆ ಕನ್ನ ಹಾಕಿರುವ ಪ್ರಕರಣ ಆಗ್ನೇಯ ವಿಭಾಗದ ಸಿಇಎನ್ ಠಾಣೆಯಲ್ಲಿ ದಾಖಲಾಗಿದೆ. ದೂರುದಾರರು ತಮ್ಮ ಮೊಬೈಲಿಗೆ ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್ಸ್ ಕ್ಲೈಮ್ ಎಂದು