ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಶಾಲೆಗೆ ಬಾಂಬ್ ಇಡೋದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಪೊಲೀಸರು, ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಶಾಲೆಯಲ್ಲಿ ಸಾವಿರಾರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಅವರನ್ನೆಲ್ಲ ಬೇರೆಡೆಗೆ ಸ್ಥಳಾಂತರ ಮಾಡುವ ಕಾರ್ಯ ನಡೆಯುತ್ತಿದೆ. ಆರ್ಆರ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿಕೆಶಿ ಮಾಲೀಕತ್ವದ ನ್ಯಾಶನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ ಇದೆ. ಈ ಶಾಲೆಗೆ ಬಾಂಬ್ ಹಾಕುವುದಾಗಿ ದುಷ್ಕರ್ಮಿಗಳು ಯೂನಿಟ್-3ಗೆ