ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ, ಅಪಘಾತ ಪ್ರಕರಣದಲ್ಲಿ ಗಾಯಗೊಂಡಿದ್ದ ಇಬ್ಬರು ಪ್ರಯಾಣಿಕರು ಇಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ರಾಯಚೂರಿನ ಸಿಂಧನೂರಿನ ಮಲ್ಲದಗುಡ್ಡ ಗ್ರಾಮದ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, 18 ವರ್ಷದ ಸುದೀಪ್, 60 ವರ್ಷದ ರಾಮಪ್ಪ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಿಂಧನೂರಿನಿಂದ ಅಂಕಲಿಮಠದ ಕಡೆಗೆ ಹೊರಟಿದ್ದ ಬಸ್ ಲಾರಿಗೆ ಡಿಕ್ಕಿ ಹೊಡೆದಿದೆ. ಇಂಡಿಕೇಟರ್ ಹಾಕದೆ ರಸ್ತೆ ಪಕ್ಕದಲ್ಲಿ