ಚಿಕ್ಕಬಳ್ಳಾಪುರ : ತಾಲೂಕಿನ ಸೂಲಿಕುಂಟೆ ಗ್ರಾಮದಲ್ಲಿ ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಜಮೀನು ವಿವಾದದ ಹಿನ್ನೆಲೆ ಒಂದೇ ಸೀರೆಯಲ್ಲಿ ಗಂಡ, ಹೆಂಡತಿ ಇಬ್ಬರು ನೇಣು ಬಿಗಿದುಕೊಂಡು ಏಕಕಾಲದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತರ ಸಂಬಂಧಿಕರು ತಿಳಿಸಿದ್ದಾರೆ.ಗ್ರಾಮದ ಚಂದ್ರಶೇಖರ್(32) ಹಾಗೂ ಶಶಿಕಲಾ(25) ಮೃತ ದುರ್ದೈವಿಗಳು. ಮನೆಯಲ್ಲಿನ ಮೇಲ್ಛಾವಣಿಯ ಸಿಮೆಂಟ್ ಶೀಟ್ ಕೆಳಗೆ ಅಡ್ಡಲಾಗಿ ಹಾಕಿರುವ ಕಬ್ಬಿಣದ ಪೈಪ್ಗೆ ಒಂದೇ ಸೀರೆಯನ್ನು ಎರಡು ಕಡೆ ನೇತು ಹಾಕಿ ಸೀರೆಯ ಎರಡು ಬದಿಗಳ